ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ಶ್ರೀನಿವಾಸ್ ನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ವಿಚಾರಣೆ ನಡೆಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ತೀವ್ರ ವಿಚಾರಣೆ ನಡೆದಿದ್ದು, ಬಸವರಾಜನ್ ಪತ್ನಿ ಸೌಭಾಗ್ಯ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.
ವಿಚಾರಣೆ ವೇಳೆ ಬಂಧಿತ ಆರೋಪಿಗಳು ಬಸವರಾಜನ್ ಹೆಸರು ಹೇಳಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸರ ತಂಡ ಬಸವರಾಜನ್ ಮನೆಯಲ್ಲಿ ಶೋಧ ನಡೆಸಿತ್ತು.
ನವೆಂಬರ್ 7 ರಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ ಹಾಗೂ ಎಸ್.ಜೆ.ಎಂ. ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿತ್ತು. ಇವರು ನೀಡಿದ ಮಾಹಿತಿ ಮೇರೆಗೆ ಬಸವರಾಜನ್ ಅವರನ್ನು ವಶಕ್ಕೆ ಪಡೆಯಲಾಗಿದೆ.