alex Certify ಬಿಡುಗಡೆ ಆಯ್ತು ‘ಸ್ಕಂದ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆ ಆಯ್ತು ‘ಸ್ಕಂದ’ ಸಿನಿಮಾ

ಬೋಯಾಪತಿ ಶ್ರೀನು ನಿರ್ದೇಶನದ ರಾಮ್ ಪೋತಿನೇನಿ ಅಭಿನಯದ ಬಹುನಿರೀಕ್ಷಿತ ‘ಸ್ಕಂದ’ ಸಿನಿಮಾ ಇಂದು ವಿಶ್ವದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹಾಗೂ ಸ್ಯಾಂಡಲ್ವುಡ್‌ ನ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿದ್ದು,  ಶ್ರೀನಿವಾಸ್ ಸ್ಕ್ರೀನ್ ಹಾಗೂ ಜಿ ಸ್ಟುಡಿಯೋಸ್ ಬ್ಯಾನರ್ ನಡಿ ಶ್ರೀನಿವಾಸ ಚಿತ್ತೂರಿ ಮತ್ತು ಪವನ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿರುವ ಈ ಚಿತ್ರದಲ್ಲಿ ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ಸೇರಿದಂತೆ ಶರತ್ ಲೋಹಿತಾಶ್ವ, ಗೌತಮಿ, ಸಾಯಿ ಮಂಜ್ರೇಕರ್, ದಗ್ಗುಬಾಟಿ ರಾಜಾ, ಇಂದ್ರಜಾ, ಪ್ರಭಾಕರ್ ತೆರೆ ಹಂಚಿಕೊಂಡಿದ್ದಾರೆ. ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಸಿನಿಮಾ ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...