![](https://kannadadunia.com/wp-content/uploads/2023/09/d06b634a-2ef6-4d00-8629-8107c34961eb-1-400x267.jpg)
ರಾಮ್ ಪೋತಿನೇನಿ ಅಭಿನಯದ ‘ಸ್ಕಂದ’ ಚಿತ್ರವನ್ನು ಸೆಪ್ಟೆಂಬರ್ 15ರಂದು ಬಿಡುಗಡೆ ಮಾಡುವುದಾಗಿ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದೀಗ ಚಿತ್ರ ತಂಡ ಬಿಡುಗಡೆ ದಿನಾಂಕವನ್ನು ಬದಲಾವಣೆ ಮಾಡಿದೆ.
ಸೆಪ್ಟೆಂಬರ್ 28ರಂದು ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.
ಬೋಯಾಪತಿ ಶ್ರೀನು ನಿರ್ದೇಶನದ ಈ ಚಿತ್ರದಲ್ಲಿ ರಾಮ್ ಪೋತಿನೇನಿ ಮತ್ತು ಸ್ಯಾಂಡಲ್ವುಡ್ ನ ಶ್ರೀಲೀಲಾ ಪ್ರಮುಖ ಪಾತ್ರದಲ್ಲಿದ್ದು, ಸಾಯಿ ಮಂಜ್ರೇಕರ್, ಶರತ್ ಲೋಹಿತಾಶ್ವ, ದಗ್ಗುಬಾಟಿ ರಾಜಾ, ಶ್ರೀಕಾಂತ್, ಗೌತಮಿ, ಇಂದ್ರಜಾ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.
![](https://kannadadunia.com/wp-content/uploads/2023/09/3c2cc4b8-1bb8-4915-bc81-5c969f83c1e9-400x610.jpg)