
ನವದೆಹಲಿ: ತೆಲಂಗಾಣದಲ್ಲಿ ನಿರ್ಮಾಣ ಹಂತದ ಸುರಂಗದ ಮೇಲ್ಚಾವಣಿ ಕುಸಿತವಾದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಸುರಂಗದಲ್ಲಿ ಸಿಲುಕಿದ ಸಿಬ್ಬಂದಿಯ ರಕ್ಷಣಾ ಕಾರ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎಲ್ಲಾ ಸಹಾಯ ಮತ್ತು ನೆರವಿನ ಭರವಸೆ ನೀಡಿದ್ದಾರೆ.
ತೆಲಂಗಾಣದ ನಾಗರ ಕರ್ನೂಲು ಜಿಲ್ಲೆಯ ದೋಮಲಪೇಟ ಬಳಿ ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗ ಕುಸಿದಿದೆ. ಸುರಂಗದಲ್ಲಿ 7ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಸಿಲುಕಿರುವ ಶಂಕೆ ಇದೆ.
SLBC ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿದರು. ಸುರಂಗದಲ್ಲಿ ಸಿಲುಕಿದ್ದ ಎಂಟು ಕಾರ್ಮಿಕರ ರಕ್ಷಿಸಲು ಕೈಗೊಂಡ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಧಾನಿಗೆ ವಿವರಿಸಿದ್ದಾರೆ.
ಸಚಿವರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣ ರಾವ್ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ರೇವಂತ್ ರೆಡ್ಡಿ ತಿಳಿಸಿದರು. ರಕ್ಷಣಾ ಕಾರ್ಯಾಚರಣೆಗಾಗಿ ತಕ್ಷಣ NDRF ತಂಡವನ್ನು ನಿಯೋಜಿಸಲಾಗುವುದು. ಮತ್ತು ತೆಲಂಗಾಣ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲದ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.