ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ.
ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬೀದರ್ ಜಿಲ್ಲೆ ಔರಾದ ತಾಲೂಕಿನ ಸುಂದಾಳ ಗ್ರಾಮ ಪಂಚಾಯಿತಿ ಪಿಡಿಒ ಪ್ರಭುದಾಸ ಅಮಾನತುಗೊಂಡಿದ್ದಾರೆ. ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭುದಾಸ ಅವರನ್ನು ಅಮಾನತು ಮಾಡಿದ್ದರು. ಮತ್ತೆ ಕೆಲಸಕ್ಕೆ ನಿಯೋಜನೆಗೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಉಪ ಕಾರ್ಯದರ್ಶಿ ಚೇಂಬರ್ ಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಪ್ರಭುದಾಸ ಜಿಪಂ ಉಪ ಕಾರ್ಯದರ್ಶಿಗೆ ಕಪಾಳ ಮೋಕ್ಷ ಮಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಹೇಳಲಾಗಿದೆ.