alex Certify ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ.

ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಬೀದರ್ ಜಿಲ್ಲೆ ಔರಾದ ತಾಲೂಕಿನ ಸುಂದಾಳ ಗ್ರಾಮ ಪಂಚಾಯಿತಿ ಪಿಡಿಒ ಪ್ರಭುದಾಸ ಅಮಾನತುಗೊಂಡಿದ್ದಾರೆ. ಜನವರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭುದಾಸ ಅವರನ್ನು ಅಮಾನತು ಮಾಡಿದ್ದರು. ಮತ್ತೆ ಕೆಲಸಕ್ಕೆ ನಿಯೋಜನೆಗೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಉಪ ಕಾರ್ಯದರ್ಶಿ ಚೇಂಬರ್ ಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಪ್ರಭುದಾಸ ಜಿಪಂ ಉಪ ಕಾರ್ಯದರ್ಶಿಗೆ ಕಪಾಳ ಮೋಕ್ಷ ಮಾಡಿ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...