ಬೆಂಗಳೂರು: ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಎಸ್.ಎಂ. ಕೃಷ್ಣ ಉಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಅವರು ಸಾಕಷ್ಟು ಕೆಲಸ ಮಾಡಿದ್ದು, ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ.
ದಸರಾ ಸಂಬಂಧ ನಡೆದ ಸಭೆಯಲ್ಲಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.