ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ.
ಅನಾರೋಗ್ಯದಿಂದ ನಿಧನರಾದ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ ನಿವಾಸದಿಂದ ಟೌನ್ ಹಾಲ್ ಮೂಲಕ ಮೈಸೂರು ಸರ್ಕಲ್, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಮೂಲಕ ಹೊರಟು ಬೆಳಗ್ಗೆ 10.30 ಕ್ಕೆ ಸ್ವಗ್ರಾಮ ಸೋಮನಹಳ್ಳಿಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಒಕ್ಕಲಿಗರ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ ವಿಧಾನ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.