ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆ ಡಿಸೆಂಬರ್ 11ರಂದು(ಇಂದು) ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿಲಾಗಿದೆ.
ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ನಾಳೆ ಕಾರ್ಯನಿರ್ವಹಿಸುತ್ತಿಲ್ಲವಾದರೂ ನಮ್ಮ ಮೆಟ್ರೋ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ನಮ್ಮೆ ಮೆಟ್ರೋ ವಿನಂತಿಸಿದೆ.
ನಮ್ಮ ಮೆಟ್ರೋ ಕಾರ್ಯಾಚರಣೆ ದಿನಾಂಕ ೧೧/೧೨/೨೦೨೪ ರಂದು ಎಂದಿನಂತೆ ಸೇವೆಯಲ್ಲಿರುತ್ತವೆ.
Namma Metro service will run as scheduled on 11/12/2024.
— ನಮ್ಮ ಮೆಟ್ರೋ (@OfficialBMRCL) December 10, 2024
ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ನಾಳೆ ಕಾರ್ಯನಿರ್ವಹಿಸುತ್ತಿಲ್ಲವಾದರೂ ‘ನಮ್ಮ ಮೆಟ್ರೋ’ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ
— ನಮ್ಮ ಮೆಟ್ರೋ (@OfficialBMRCL) December 10, 2024