
ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ಕೃಷ್ಣ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತನ್ ಚೇತರಿಕೆ ಕಂಡು ಬಂದಿದೆ. ವೈದ್ಯರು ಅವರ ಆರೋಗ್ಯ ಬಗ್ಗೆ ನಿಗಾವಹಿಸಿದ್ದು, ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.