ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಎಸ್.ಎಂ. ಕೃಷ್ಣ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ. ಸತ್ಯನಾರಾಯಣ, ಡಾ. ಸುನಿಲ್ ಕಾರಂತ್ ತಂಡದಿಂದ ಎಸ್.ಎಂ. ಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.