ಎಸ್.ಎಂ. ಕೃಷ್ಣಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಎಸ್.ಎಂ. ಕೃಷ್ಣ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

:ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ(ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೆ  ಅವರಲ್ಲಿ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read