ಬೆಂಗಳೂರು: ಅನಾರೋಗ್ಯದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರದ್ದು ಅತ್ಯಂತ ಶಿಸ್ತು ಬದ್ಧ ಜೀವನವಾಗಿದೆ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ ಎಂದು ಭೇಟಿ ಬಳಿಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶೀಘ್ರ ಗುಣಮುಖರಾಗಲಿದ್ದಾರೆ. ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ಗೊತ್ತಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದ್ದಾರೆ.