ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳೇ ಜೀವಾಳವಾಗಿದೆ. ಈ ಹಿಂದೆ ಬಹುತೇಕ ಎಲ್ಲ ಊರುಗಳಲ್ಲಿಯೂ ಕೆರೆಗಳಿದ್ದು, ಆದರೆ ಅಭಿವೃದ್ಧಿ ಹೆಸರಿನಲ್ಲಿ ಅವುಗಳನ್ನು ಮುಚ್ಚಲಾಗಿದೆ ಇಲ್ಲವೇ ಒತ್ತುವರಿ ಮಾಡಿಕೊಳ್ಳಲಾಗಿದೆ. ಇದೀಗ ಸಣ್ಣ ಕೆರೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ನೂರು ಎಕರೆಗಿಂತ ಕಡಿಮೆ ವಿಸ್ತೀರ್ಣವುಳ್ಳ ಕೆರೆಗಳನ್ನು ನೀರಾವರಿ ಇಲಾಖೆ ವ್ಯಕ್ತಿಯಿಂದ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಬಳಿಕ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಇವುಗಳ ಒತ್ತುವರಿ ತೆರವು ಹಾಗೂ ಹೂಳೆತ್ತುವ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ 12 ಸಾವಿರಕ್ಕೂ ಅಧಿಕ ಕೆರೆಗಳ ವಿಸ್ತೀರ್ಣ 100 ಎಕರೆಗಿಂತ ಕಡಿಮೆ ಇದ್ದು, ಇವುಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಿದರೆ ಅಭಿವೃದ್ಧಿಪಡಿಸಲು ಅನುಕೂಲ ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ. ಇದರಿಂದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಕ್ಕಂತಾಗುತ್ತದೆ ಎಂಬುದು ಸರ್ಕಾರದ ನಿಲುವಾಗಿದೆ.