ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಮತ್ತೆ ಮುಂದೂಡಿದೆ.
ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಈ ಮೂಲಕ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ತಾವು ಸೆಪ್ಟೆಂಬರ್ 12ರಂದು ವಾದಿಸುವುದಾಗಿ ಸಿದ್ದರಾಮಯ್ಯನವರ ಪರ ವಕೀಲ ಅಭಿಷೇಕ್ ಸಿಂಘ್ವಿ ಕೋರ್ಟ್ಗೆ ಮನವಿ ಮಾಡಿದರು.