ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಮಂಡಳಿ ಸಭೆಯಲ್ಲಿ ಮಾತನಾಡಿದ ಸಚಿವರು, ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕ ಅಪಘಾತ ಪರಿಹಾರ ಯೋಜನೆಯಡಿ ಚಾಲಕರು ಪರಿಹಾರ ಪಡೆಯಲು ಇರುವ ಷರತ್ತು ಸಡಿಲಿಕೆ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದ್ದು, ಅಸಂಘಟಿತ ಕಾರ್ಮಿಕರಿಗೆ ನೀಡುತ್ತಿರುವ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.