alex Certify BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ.

ಕಾರ್ಡ್ ಗೆ 16 ರಿಂದ 17 ರೂಪಾಯಿ ವೆಚ್ಚವಾಗಲಿದ್ದು, ಇದನ್ನು ಯಾರು ಭರಿಸಬೇಕು ಎಂಬುದರ ಜೊತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ.

ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು, ಈ ಗೊಂದಲಗಳಿಗೆ ತೆರೆ ಎಳೆಯಲು ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...