ಲಖ್ನೋ: 12ನೇ ತರಗತಿ ಪಾಸಾದ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿ ವಿದ್ಯಾರ್ಥಿನಿಯರಿಗೆ ಸ್ಕೂಟಿ ಉಚಿತವಾಗಿ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ 12ನೇ ತರಗತಿ ಪಾಸಾದ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಉಚಿತವಾಗಿ ಕೊಡಲಾಗುವುದು ಎಂದು ಹೇಳಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಇದರ ಬಗ್ಗೆ ಅಧಿಕೃತವಾಗಿ ಭರವಸೆ ನೀಡಲಾಗುತ್ತದೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಸ್ಮಾರ್ಟ್ಫೋನ್ ಮತ್ತು ವಾಹನದ ಅವಶ್ಯಕತೆ ಇರುವ ಬಗ್ಗೆ ತಿಳಿಸಿದ್ದು, ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಸ್ಮಾರ್ಟ್ಫೋನ್ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಉಚಿತವಾಗಿ ನೀಡಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗುವುದು.