ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿಸಿದ್ದಾರೆ.
ಜಿ. ಕರುಣಾಕರನ್ ಬಂಧಿತ ಪ್ರಯಾಣಿಕ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಕರುಣಾಕರನ್ ಬೀಡಿ ಸೇದಿದ್ದು, ಏರ್ ಕ್ರಾಫ್ಟ್ ಕಾಯ್ದೆ ಅಡಿಯಲ್ಲಿ ಕರುಣಾಕರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸೆಪ್ಟೆಂಬರ್ 3ರಂದು ರಾತ್ರಿ ಕೊಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ್ದ. ಸಹ ಪ್ರಯಾಣಿಕರು ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಕೂಡಲೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ.