alex Certify ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ ಸ್ಮೃತಿ ಮಂದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಸಿಡಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದ ಸ್ಮೃತಿ ಮಂದಾನ

ಟೀಂ ಇಂಡಿಯಾ ಮಹಿಳಾ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಕ್ವೀನ್ಸ್​ಲ್ಯಾಂಡ್​ನ ಕ್ಯಾರರಾದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಪಂದ್ಯದ 2ನೇ ದಿನದಂದು ಶತಕ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಳೆಯಿಂದಾಗಿ ಪಂದ್ಯ ರದ್ದಾಗುವ ವೇಳೆಯಲ್ಲಿ ಸ್ಮೃತಿ ಮಂದಾನ 80 ರನ್​ಗಳನ್ನು ಪೇರಿಸಿದ್ದರು. ಇಂದು ಎರಡನೇ ದಿನದ ಆಟ ಮುಂದುವರಿಸಿದ ಮಂದಾನ ಶತಕವನ್ನು ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾದ ಕ್ಯಾರರಾದಲ್ಲಿ ನಡೆಯುತ್ತಿರುವ ಟೀಂ ಇಂಡಿಯಾ ಹಾಗೂ ಆಸಿಸ್​ ನಡುವಿನ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದಿದ್ದ ಆಸ್ಟ್ರೇಲಿಯಾ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತ್ತು. ಆದರೆ ಆಸ್ಟ್ರೇಲಿಯಾ ಬೌಲರ್​ಗಳ ಎದುರು ಭರ್ಜರಿ ಪ್ರದರ್ಶನ ತೋರುವ ಮೂಲಕ ಸ್ಮೃತಿ ಮಂದಾನ ಆಸ್ಟ್ರೇಲಿಯಾ ಲೆಕ್ಕಾಚಾರವನ್ನು ತಲೆಕೆಳಗು ಮಾಡಿದ್ದಾರೆ.

ಆರಂಭಿಕವಾಗಿ ಕಣಕ್ಕೆ ಇಳಿದಿದ್ದ ಸ್ಮೃತಿ ಮಂದಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ 93 ರನ್​ಗಳನ್ನು ಸೇರಿಸಿಕೊಡುವಲ್ಲಿ ಯಶಸ್ವಿಯಾದರು. ಬಳಿಕ 31 ರನ್​ಗೆ ಶಫಾಲಿ ವರ್ಮಾ ಔಟಾಗಿ ಪೆವಿಲಿಯನ್​ಗೆ ಮರಳಿದ್ರು. ಇದಾದ ಬಳಿಕ ಪೂನಮ್​ ರಾವತ್​ ಜೊತೆ ಆಟವಾಡಿದ ಮಂದಾನಾ ಈ ಐತಿಹಾಸಿಕ ಸಾಧನೆ ನಿರ್ಮಿಸಿ ಮುನ್ನುಗ್ಗಿದ್ದಾರೆ.

— cricket.com.au (@cricketcomau) October 1, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...