alex Certify BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ.

10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. ಸೋನಿಕಾ ಪಾಟೀಲ್ 4ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಿನ್ನೆ ಶಾಲೆಯಿಂದ ಮನೆಗೆ ವಾಪಾಸ್ ಆಗುತ್ತಿದ್ದಾಗ ಹಾವು ಕಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...