alex Certify ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ.

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಡಿದು ವೀಣಾ(35) ಮೃತಪಟ್ಟಿದ್ದಾರೆ. ಶುಕ್ರವಾರ ಜಮೀನಿನಲ್ಲಿ ಕೆಲಸ ಮಾಡುವಾಗ ವೀಣಾ ಅವರಿಗೆ ಹಾವು ಕಡಿದು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಗೆಣಸಿನಕುಣಿಯಲ್ಲಿ ನಾಟಿ ಔಷಧ ಕೊಡಿಸಿ ಬಳಿಕ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...