alex Certify ಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಕ್ಕೆಜೋಳದ ಹೊಲದಲ್ಲಿ ಕಚ್ಚಿದ ಹಾವು: ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ.

ಹಾವು ಕಚ್ಚಿ ಅಸ್ವಸ್ಥಗೊಂಡಿದ್ದ ವೀಣಾ ಲಿಂಗನಗೌಡ(26) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುವಾಗ ಹಾವು ಕಚ್ಚಿದೆ. ಹಾವು ಕಚ್ಚಿದ ಕೂಡಲೇ ಅವರನ್ನು ಹೊಳಲು ಆರೋಗ್ಯ ಕೇಂದ್ರಕ್ಕೆ ಕರೆ ತರಲಾಗಿದ್ದು, ವೈದ್ಯರಿಲ್ಲದ ಕಾರಣ ಹಾವೇರಿ ತಾಲೂಕಿನ ಗುತ್ತಲ ಆರೋಗ್ಯ ಕೇಂದ್ರಕ್ಕೆ ವಾಹನದಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...