
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇವಲ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತ್ರ ನನ್ನ ಹೋರಾಟವಲ್ಲ, ಒಟ್ಟಾರೆಯಾಗಿ ಅಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ನನ್ನ ಹೋರಾಟ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
ಯಾರೆಲ್ಲ 50:50 ನಿವೇಶನ ಪಡೆಯುವ ಅಕ್ರಮದಲ್ಲಿ ಶಾಮೀಲಾಗಿದ್ದಾರೋ ಅವೆರೆಲ್ಲರ ವಿರುದ್ಧ ತನಿಖೆ ನಡೆದು ಕ್ರಮವಾಗಬೇಕು ಎಂಬುದು ನನ್ನ ಆಶಯ ಎಂದರು.
ಮುಡಾ ಹಗರಣದ ಬಗ್ಗೆ ದಾಖಲೆಗಳನ್ನು ಒದಗಿಸಿದ್ದು ಕಾಂಗ್ರೆಸ್ ನಾಯಕರು. ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ. ನೇರವಾಗಿ ಎದುರು ಬಂದು ಹೋರಾಟ ಮಾಡಲು ಸಾಧ್ಯವಿಲ್ಲ ಎಂದು ಹಲವರು ನನ್ನ ಮೂಲಕ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಖಂಡರೇ ದಾಖಲೆಗಳನ್ನು ತಂದುಕೊಟ್ಟಿದ್ದಾರೆ ಎಂದು ಹೇಳಿದರು.