ಮಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಿತ ಸಂದೇಶ ರವಾನಿಸುವವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದುರು.
ಇತ್ತೀಚಿನ ದಿನಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಇತರೆ ಅಪ್ಲಿಕೇಷನ್ ಮೂಲಕ ಕೋಮು ಪ್ರಚೋದಿತ ಸೂಕ್ಷ್ಮ ಸಂದೇಶ ಪೋಸ್ಟ್ ಮಾಡುವರ ಸಂಖ್ಯೆ ಹೆಚ್ಚಾಗುತ್ತಿದೆ. ಯಾವುದೇ ಧರ್ಮಗಳ ಪರ ಅಥವಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಮೇಲೆ ನಿಗಾ ವಹಿಸಲಾಗುವುದು. ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಅಲ್ಲದೇ ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೇಲೂ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.