alex Certify ಅಭಿಮಾನಿಯನ್ನು ನಿರ್ಲಕ್ಷಿಸಿದ ನಟ ಅಕ್ಷಯ್ ಕುಮಾರ್ ವಿರುದ್ಧ ನೆಟ್ಟಿಗರು ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಯನ್ನು ನಿರ್ಲಕ್ಷಿಸಿದ ನಟ ಅಕ್ಷಯ್ ಕುಮಾರ್ ವಿರುದ್ಧ ನೆಟ್ಟಿಗರು ಗರಂ

Social media users disappointed by Akshay Kumar ignoring fan at airport - Bharat Times English News

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಏರ್ ಪೋರ್ಟ್ ನಲ್ಲಿ ಅಭಿಮಾನಿಯೊಬ್ಬರನ್ನು ನಿರ್ಲಕ್ಷಿಸಿದ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಭಾರಿ ವೈರಲ್ ಆಗಿದೆ.

ಚಿತ್ರೀಕರಣದ ಬ್ಯುಸಿಯಲ್ಲಿರುವ ಅಕ್ಷಯ್ ಕುಮಾರ್ ಚಿತ್ರೀಕರಣಕ್ಕಾಗಿ ಭಾರತ ಹಾಗೂ ವಿದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ. ಇತ್ತೀಚೆಗೆ ಅವರು ಲಂಡನ್ ನಿಂದ ಹಿಂದಿರುಗಿದಾಗ ಅಕ್ಷಯ್ ನನ್ನು ಕಂಡು ಅಭಿಮಾನಿಯೊಬ್ಬಳು ಓಡೋಡಿ ಬಂದಳು. ತಾನು ನಟನ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾಳೆ. ಆದರೆ, ಅಕ್ಷಯ್ ಅವಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಕೆಲವು ಹೆಜ್ಜೆ ಹಿಂದಕ್ಕೆ ಹೋಗಿ ಕಾರಿನಲ್ಲಿ ಕುಳಿತು ಹೊರಟು ಹೋಗಿದ್ದಾರೆ.

ಇಡೀ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು, ಅಕ್ಷಯ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳನ್ನು ಗೌರವಿಸಿ ಅಂತೆಲ್ಲಾ ಕಮೆಂಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...