ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ಕ್ರಮವಹಿಸಲಾಗಿದೆ.
ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಗಳಡಿ ಬರುವ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂದ್ಯಾಸುರಕ್ಷಾ ವೇತನ, ವಿಧವಾ ವೇತನ, ರೈತರ ಆತ್ಮಹತ್ಯೆ, ಪ್ರಕರಣದಡಿ ರೈತ ಪತ್ನಿಗೆ ನೀಡುವ ವಿಧವಾ ವೇತನ, ಅಂಗವಿಕಲ ವೇತನ, ಆಸಿಡ್ ಪ್ರಕರಣದಡಿ ನೀಡುವ ವೇತನ, ಮನಸ್ವಿನಿ, ಮತ್ತು ಮೃತ್ರಿ ಯೋಜನೆಗಳನ್ನು ಅಕ್ಟೋಬರ್ 2023 ರ ಮಾಹೆಯಿಂದ ಪಿಂಚಣಿ ಪಾವತಿಯನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ (ಆಃಖಿ) ಯೋಜನೆಯಡಿ ತರಲು ಕ್ರಮವಹಿಸಲಾಗಿದ್ದು, ಪಿಂಚಣಿ, ಮತ್ತು ಸಹಾಯಧನ ಪಡೆಯುವ ಫಲಾನುಭವಿಗಳು ತಪ್ಪದೇ ತಮ್ಮ ಆಧಾರ್ ನಂಬರ್‍ನ್ನು ಬ್ಯಾಂಕ್, ಅಂಚೆ ಉಳಿತಾಯ ಖಾತೆಗೆ ಎನ್.ಪಿ.ಸಿ.ಐ ಮಾಡಿಸುವುದು ಕಡ್ಡಾಯವಾಗಿದೆ.
ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು, ಅಕ್ಟೋಬರ್ 25 ರ ಒಳಗಾಗಿ ತಮ್ಮ ಆಧಾರ್ ನಂಬರ್‍ನ್ನು ಪಿಂಚಣಿ ಪಡೆಯುವ ಬ್ಯಾಂಕ್, ಅಂಚೆ ಕಚೇರಿಗೆ ಸಂಪರ್ಕಿಸಿ ತಕ್ಷಣವೇ ಆಧಾರ್ ಜೋಡಣೆ ಪ್ರಕ್ರಿಯೆಯ ಜೊತೆಗೆ ಲಿಂಕ್ ಮಾಡಿಕೊಳ್ಳಬೇಕು. ಈಗಾಗಲೇ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆಯಾಗಿದ್ದರೆ, ಮ್ಯಾಪಿಂಗ್ ಆಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಬ್ಯಾಂಕ್, ಅಂಚೆ ಕಚೇರಿಗೆ ಭೇಟಿ ನೀಡಿ ಖಚಿತಪಡಿಸಿಕೊಳ್ಳಬೇಕು
ಮ್ಯಾಪಿಂಗ್ ಮಾಡಿಸಲು ಆಕ್ಟೋಬರ್ 25 ಕೊನೆಯ ದಿನವಾಗಿದ್ದು ಒಂದು ವೇಳೆ ಪಿಂಚಣಿದಾರರು ಆಧಾರ್ ಜೋಡಣೆ ಮಾಡಿಸದಿದ್ದರೆ ಪಿಂಚಣಿ ಪಾವತಿ ಸ್ಥಗಿತವಾಗಲಿದೆ ಎಂದು ತಿಳಿಸಲಾಗಿದೆ.