ಬೆಂಗಳೂರು : ವೃದ್ಯಾಪ್ಯ, ವಿಧವಾ ವೇತನ ಸೇರಿ ವಿವಿಧ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಬ್ಯಾಂಕ್ ಮತ್ತು ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕು.
ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು ನೇರ ಹಣ ಸಂದಾಯ ಯೋಜನೆಯಡಿ ತರುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಮತ್ತು ಅಂಚೆ ಖಾತೆಗಳಿಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಬೇಕು.
ಅ.20 ರೊಳಗಾಗಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಲು ಕಾಲಾವಕಾಶ ಇದೆ. ತಪ್ಪಿದ್ದಲ್ಲಿ ಸರ್ಕಾರವು ಕಾಲ ಕಾಲಕ್ಕೆ ತೆಗೆದುಕೊಳ್ಳುವ ನಿರ್ಧಾರಗಳಿಗೆ ಅರ್ಹ ಫಲಾನುಭವಿಗಳೆ ಜವಾಬ್ದಾರರಾಗಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.