alex Certify ಸಿನಿಮಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಾಮಾಜಿಕ ಭದ್ರತೆ: ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಾಮಾಜಿಕ ಭದ್ರತೆ: ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪನೆ

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು, ಕಲಾವಿದರು ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ  ಕಾರ್ಮಿಕ ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಧಾನ ಮಂಡಲದ ಉಭಯ ಸದನಗಳಲ್ಲಿ ಈ ಬಗ್ಗೆ ಮಸೂದೆ ಮಂಡಿಸಿ ಒಪ್ಪಿಗೆ ಪಡೆದಿದ್ದು, ಇದು ಕಾಯ್ದೆಯಾಗಿ ಜಾರಿಯಾದಲ್ಲಿ ಕಾರ್ಮಿಕ ಸಚಿವರ ಅಧ್ಯಕ್ಷತೆಯ ಮಂಡಳಿ ರಚನೆಯಾಗಲಿದೆ.

ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರು, ಕೌಶಲಯುಕ್ತ ಮತ್ತು ಕೌಶಲ ಅಗತ್ಯವಿಲ್ಲದ ಕೆಲಸದಲ್ಲಿ ತೊಡಗಿಸಿಕೊಂಡವರಿಗೆ ಸಾಮಾಜಿಕ ಭದ್ರತೆ ನೀಡಲಾಗುವುದು. ಚಲನಚಿತ್ರ, ನಾಟಕ, ಸಂಗೀತ, ನೃತ್ಯ, ಜಾನಪದ, ಲಲಿತಕಲಾ, ಯಕ್ಷಗಾನ, ಬಯಲಾಟ ಅಕಾಡೆಮಿ ನಿರ್ವಹಿಸುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡವರು, ಏಕ ಪರದೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ದೂರದರ್ಶನ ವಾಹಿನಿಗಳು, ಒಟಿಟಿಗೆ ಸಂಬಂಧಿಸಿದ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡವರು ಸೌಲಭ್ಯ ಪಡೆಯಬಹುದು.

ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಪತ್ನಿ/ಪತಿ, ಅಪ್ರಾಪ್ತ ಗಂಡು ಮಕ್ಕಳು, ಅವಿವಾಹಿತ ಹೆಣ್ಣು ಮಕ್ಕಳು, ಪೋಷಕರು ಸಂಪೂರ್ಣವಾಗಿ ಅವಲಂಬಿತರಾಗಿರುವ ಮಾನಸಿಕ ಅಸ್ವಸ್ಥ, ಅಂಗವಿಕಲ, ವಿಧವೆ ಹೆಣ್ಣು ಮಕ್ಕಳಿಗೆ ಇದು ಅನ್ವಯವಾಗಲಿದೆ.

ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ. ಈ ನಿಧಿಯ ಮೂಲಕವೇ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸ್ಥಳೀಯ ಸಂಸ್ಥೆಗಳು ನೀಡಿದ ಅನುದಾನವನ್ನು ಈ ನಿಧಿ ಒಳಗೊಳ್ಳಲಿದ್ದು, ನೋಂದಾಯಿತ ಕಾರ್ಯಕರ್ತರಿಂದ ವಂತಿಗೆ ಸಂಗ್ರಹಿಸಲು ಮಸೂದೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅಲ್ಲದೆ, ಸಿನಿಮಾ ಟಿಕೆಟ್ ದರದ ಮೇಲೆ ಸೆಸ್ ವಿಧಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...