
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ.
ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ FIRE ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ
ಸಭೆಯಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ, ಭದ್ರತೆ, ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಸಭೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಬಳಿಕ ರಾಜ್ಯದಲ್ಲಿ ಸಮಿತಿ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.