alex Certify ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಸೋದರ ಸೋಮಶೇಖರ ರೆಡ್ಡಿ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಬಗ್ಗೆ ಸೋದರ ಸೋಮಶೇಖರ ರೆಡ್ಡಿ ಮಹತ್ವದ ಹೇಳಿಕೆ

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕೇವಲ ಊಹಾಪೋಹವಷ್ಟೇ ಎಂದು ಅವರ ಸೋದರ ಮತ್ತು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಎಲ್ಲಾ ಪ್ರಯತ್ನ ನಡೆದಿದೆ ಎಂದರು.

ಒಂದು ವೇಳೆ ಜನಾರ್ಧನ ರೆಡ್ಡಿ ಹೊಸ ಪಕ್ಷ ಕಟ್ಟಿದರೆ ನಾನು ಆ ಪಕ್ಷಕ್ಕೆ ಹೋಗುವುದಿಲ್ಲ. ಈ ಹಿಂದೆ ಎಲ್ಲವನ್ನು ಅನುಭವಿಸಿರುವೆ. ಬಿಜೆಪಿಯಲ್ಲೇ ಇರುತ್ತೇನೆ ಅಥವಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಯಾವುದೇ ಕಾರಣಕ್ಕೂ ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...