ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಗೋವಾ ಮುಖ್ಯಮಂತ್ರಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಗೋವಾದ ರೆಸ್ಟೋರೆಂಟ್ ನಲ್ಲಿ ಸೋನಾಲಿ ಪೋಗಟ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು.
ಕುಟುಂಬದವರು ಮತ್ತು ಗೋವಾ ರಾಜ್ಯ ಸರ್ಕಾರದ ನಿರಂತರ ಮನವಿಯ ನಂತರ, ಕಳೆದ ತಿಂಗಳು ನಿಗೂಢವಾಗಿ ಸಾವನ್ನಪ್ಪಿದ ಸೋನಾಲಿ ಫೋಗಟ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ವಹಿಸಿಕೊಂಡಿದೆ.
ಹರಿಯಾಣ ಬಿಜೆಪಿ ನಾಯಕಿ ಮತ್ತು ಜನಪ್ರಿಯ ಟಿಕ್ ಟಾಕ್ ತಾರೆ ಸಾವಿನ ಕುರಿತು ಸಿಬಿಐ ತನಿಖೆಗೆ ಕೋರಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆದ ನಂತರ ಈ ಬೆಳವಣಿಗೆ ನಡೆದಿದೆ.