ಹುಬ್ಬಳ್ಳಿ: ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ನನ್ನ ಮಗ ರಾಹುಲ್ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಕರ್ನಾಟಕದ ಜನತೆ ಬಿಜೆಪಿಗೆ ಆಶೀರ್ವಾದ ಮಾಡಬೇಡಿ. ಮೇ 10 ರಂದು ನಿಮ್ಮ ಅಮೂಲ್ಯವಾದ ಮತ ಕಾಂಗ್ರೆಸ್ ಗೆ ನೀಡಿ. ಜನರ ಆಶೀರ್ವಾದಕ್ಕಿಂತಲೂ ಯಾವುದೂ ದೊಡ್ಡದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ ಅಭಿವೃದ್ಧಿ ಮಾಡಿಲ್ಲ. ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ. ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.