
ನವದೆಹಲಿ: ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೋನಿಯಾ ಗಾಂಧಿ ವಿಚಾರಣೆ ನಡೆಸಲಾಗಿದ್ದು, ನಾಳೆಯೂ ವಿಚಾರಣೆ ಮುಂದುವರೆಯಲಿದೆ.
ಇಂದು ಆರು ಗಂಟೆಗಳ ಕಾಲ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿಯವರನ್ನು ವಿಚಾರಣೆಗೊಳಪಡಿಸಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.