ವಾಯುಮಾಲಿನ್ಯ ಹೆಚ್ಚಳ : ದೆಹಲಿಯಿಂದ ಜೈಪುರಕ್ಕೆ ತೆರಳಿದ ಸೋನಿಯಾ ಗಾಂಧಿ | Sonia Gandhi

ನವದೆಹಲಿ:  ದೀಪಾವಳಿಯ ನಂತರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಡಿಮೆ ಕಲುಷಿತ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ.

ರಾಷ್ಟ್ರ  ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ತಪ್ಪಿಸಲು ಸೋನಿಯಾ ಗಾಂಧಿ ಮುಂದಿನ ಕೆಲವು ದಿನಗಳವರೆಗೆ ಜೈಪುರದಲ್ಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನ ಜೈರಾಮ್ ರಮೇಶ್ ಹೇಳಿದ್ದಾರೆ. ಇದು ಸಂಪೂರ್ಣವಾಗಿ ವೈಯಕ್ತಿಕ ಭೇಟಿ ಎಂದು ಅವರು ಹೇಳಿದರು.

76 ವರ್ಷದ ಸೋನಿಯಾ ಗಾಂಧಿ ಅವರಿಗೆ ಗಾಳಿಯ ಗುಣಮಟ್ಟ ಉತ್ತಮವಾಗಿರುವ ಸ್ಥಳಕ್ಕೆ ತೆರಳುವಂತೆ ವೈದ್ಯರು ಸಲಹೆ  ನೀಡಿದ್ದಾರೆ. ನವದೆಹಲಿ: ಛತ್ತೀಸ್ ಗಢದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮೊದಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೈಪುರದಲ್ಲಿ ತಮ್ಮ ತಾಯಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ  ಸಂಜೆ 4 ಗಂಟೆಗೆ ಬಿಡುಗಡೆಯಾದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೆಹಲಿಯ ಸರಾಸರಿ ಗಾಳಿಯ ಗುಣಮಟ್ಟವು “ತುಂಬಾ ಕಳಪೆ” ಆಗಿದ್ದು, ಎಕ್ಯೂಐ 397 ಮತ್ತು ಜೈಪುರದ ಎಕ್ಯೂಐ 264 (ಕಳಪೆ) ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read