alex Certify ಸೋನಿಯಾ ಗಾಂಧಿಗೆ ED ಕಿರುಕುಳ; ರಾಜ್ಯಾದ್ಯಂತ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋನಿಯಾ ಗಾಂಧಿಗೆ ED ಕಿರುಕುಳ; ರಾಜ್ಯಾದ್ಯಂತ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಇಡಿ (ಜಾರಿ ನಿರ್ದೇಶನಾಲಯ) ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಇಂದೂ ಕೂಡ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಿದ್ದು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವಿಚಾರಣೆ ಹೆಸರಲ್ಲಿ ತಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ. ಸಂಸತ್ ಅಧಿವೇಶನ ಆರಂಭವಾಗಿದ್ದರೂ ಅಧಿವೇಶನಕ್ಕೆ ತೆರಳಲು ಅವಕಾಶ ನೀಡದೇ ಸೋನಿಯಾ ಗಾಂಧಿಯವರನ್ನು ಇಡಿ ಅಧಿಕಾರಿಗಳಿಂದ ವಿಚಾರಣೆಗೊಳಪಡಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಇಡಿ ವಿಚಾರಣೆ ಖಂಡಿ ರಾಜ್ಯದಲ್ಲಿ ಜಿಲ್ಲಾವಾರು ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ.

ಬೆಂಗಳೂರು, ಮೈಸೂರು, ಉಡುಪಿ, ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದರೆ, ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಹಾಗೂ ಮೈಸೂರಿನಲ್ಲಿ ಜಿ.ಪರಮೇಶ್ವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಹಲವಡೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...