ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬರಲಿದ್ದಾರೆ, ಇಂದು ಸೋನಿಯಾ ಗಾಂಧಿಯವರ ಮೊದಲ ಚುನಾವಣಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಸಂಜೆ 5.30ಕ್ಕೆ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸಾಥ್ ನೀಡಲಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಇಂದು ಸೋನಿಯಾ ಗಾಂಧಿ ಕೂಡ ಬರಲಿದ್ದಾರೆ. ಸಂಜೆ 5:30ಕ್ಕೆ ಹುಬ್ಬಳ್ಳಿಯಲ್ಲಿ ನಡೆಯುವ ಸಮಾವೇಶದಲ್ಲಿ ಸೋನಿಯಾ ಗಾಂಧಿ ಭಾಗವಹಿಸಲಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.