ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ರಾಯಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 1999 ರಿಂದ 6 ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸುವ ಸಾಧ್ಯತೆ ಇದೆ.
ಸೋನಿಯಾ ಗಾಂಧಿಯವರು ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. 1999ರಲ್ಲಿ ಮೊದಲ ಬಾರಿಗೆ ಅಮೇಥಿ ಮತ್ತು ಬಳ್ಳಾರಿಯಲ್ಲಿ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎರಡು ಕಡೆ ಗೆದ್ದಿದ್ದರು. ನಂತರ ರಾಯ್ ಬರೇಲಿ ಕ್ಷೇತ್ರದಿಂದ ಐದು ಬಾರಿ ಜಯಗಳಿಸಿದ್ದಾರೆ.
ಈ ಬಾರಿ ಸೋನಿಯಾಂಧಿ ಅವರು ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕಗಳು ಸೋನಿಯಾ ಗಾಂಧಿಯವರಿಗೆ ಆಹ್ವಾನ ನೀಡಿವೆ. ಅವರು ರಾಜಸ್ಥಾನ ಇಲ್ಲವೇ ಹಿಮಾಚಲ ಪ್ರದೇಶದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ಸಜ್ಜಾಗಿದ್ದು, ರಾಯಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.