alex Certify BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಾಳೆ ಮೈಸೂರಿಗೆ ಸೋನಿಯಾ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಭಾಗಿ

ಮೈಸೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.30 ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ ಹೆಲಿಕಾಪ್ಟರ್ ನಲ್ಲಿ ಮಡಿಕೇರಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೂರ್ಗ್ ವೈಲ್ಡ್ ನೆಸ್ಟ್ ರೆಸಾರ್ಟ್ ನಲ್ಲಿ ತಂಗಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈಗೊಂಡಿರುವ ‘ಭಾರತ್ ಜೋಡೋ ಯಾತ್ರೆ’ಗೆ ಆಯುಧಪೂಜೆ ಮತ್ತು ವಿಜಯದಶಮಿ ಅಂಗವಾಗಿ ಎರಡು ದಿನ ಬಿಡುವು ನೀಡಲಾಗಿದೆ.

ಎರಡು ದಿನ ರೆಸಾರ್ಟ್ ನಲ್ಲಿ ಸೋನಿಯಾ ಗಾಂಧಿ ತಂಗಲಿದ್ದು, ರಾಹುಲ್ ಗಾಂಧಿ ಹಾಗೂ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಕೂಡ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 6 ರಂದು ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ. ಸಾಂಕೇತಿಕವಾಗಿ ಕೆಲಕಾಲ ಹೆಜ್ಜೆ ಹಾಕಿ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...