ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆಯಾಗಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿದ್ದಾರೆ. ಅವರ ಪ್ರಸ್ತಾಪಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಕೆ. ಸುಧಾಕರನ್, ತಾರಿಕ್ ಅನ್ವರ್, ಗೌರವ್ ಗೊಗೊಯ್ ಅವರು ಖರ್ಗೆಯವರ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ವಿಪಕ್ಷ ನಾಯಕರಾಗಲು ಅನುಮೋದನೆ ನೀಡಲಾಗಿದ್ದು, ಈ ಬಗ್ಗೆ ಸಂಸದೀಯ ಪಕ್ಷದ ಸಭೆಯಲ್ಲಿಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.