alex Certify GOOD NEWS : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ  2.50 ಲಕ್ಷ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ( Priyank Kharge ) ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು  ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 1.40 ಲಕ್ಷ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಪ್ರತಿನಿತ್ಯ 7.35 ಲಕ್ಷ ಮಹಿಳಾ ಪ್ರಯಾಣಿಕರು ( Passengers ) ಇದರ ಸೌಲಭ್ಯ ಪಡೆಯಲಿದ್ದಾರೆ ಎಂದರು.

ಮಾಸಿಕ 3,000 ರೂ. ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ”, ಹಸಿವು ಮುಕ್ತ ಕರ್ನಾಟಕ್ಕಾಗಿ “ಅನ್ನಭಾಗ್ಯ” ಯೋಜನೆಯಡಿ ಪ್ರತಿ ಸದಸ್ಯನಿಗೆ 10 ಕೆ.ಜಿ. ಆಹಾರ ಧಾನ್ಯ, ಮನೆಯ ಯಜಮಾನಿಗೆ 2,000 ರೂ. ಒದಗಿಸುವ “ಗೃಹ ಲಕ್ಷ್ಮೀ”, ಮಾಸಿಕ 200 ಯೂನಿಟ್ ಉಚಿತ ವಿದ್ಯುತ್( Free electricity)  ನೀಡುವ “ಗೃಹ ಜ್ಯೋತಿ” ಯೋಜನೆ ಜಾರಿಗೆ ತರಲಾಗುತ್ತಿದ್ದು, ಬರುವಂತಹ ದಿನದಲ್ಲಿ ಈ ಯೋಜನೆಯ ಲಾಭ ರಾಜ್ಯದ ಜನತೆ ಪಡೆಯಲಿದ್ದಾರೆ ಎಂದ ಅವರು ಮುಂದಿನ ದಿನದಲ್ಲಿ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಸಹ ಭರ್ತಿ ಮಾಡಲು ಚಿಂತನೆ ನಡೆದಿದೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...