ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ.
ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಕೆ ಮಾಡಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಹೊಸ ದರಗಳು ಅನ್ವಯವಾಗುತ್ತವೆ. ಆಗಸ್ಟ್ 23ರಂದು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿ 15 ದಿನ ಕಾಲಾವಕಾಶ ನೀಡಿತ್ತು. ಹೀಗಾಗಿ ಶೀಘ್ರವೇ ದರ ಹೆಚ್ಚಳಕ್ಕೆ ಅಸ್ತು ಎಂದಿದ್ದು, ಬಿಯರ್ ಬಾಟಲ್ ಗೆ 10 ರೂ.ವರೆಗೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಕಳೆದ ಒಂದೂವರೆ ವರ್ಷದಲ್ಲಿ ಮೂರು ಬಾರಿ ಬಿಯರ್ ದರ ಹೆಚ್ಚಳವಾದಂತಾಗುತ್ತದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಸ್ಲ್ಯಾಬ್ ನಲ್ಲಿ ಮಾತ್ರ ಬಿಯರ್ ಮಾರಾಟ ಮಾಡಲಾಗುತ್ತಿತ್ತು. ಅದನ್ನು ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ಮೂರು ಸ್ಲ್ಯಾಬ್ ಮಾಡಿ ಪ್ರತಿ ಸ್ಲಾಬ್ ನ ದರ ಹೆಚ್ಚಳ ಮಾಡಲಾಗುವುದು.