
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಮನೆಯ ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 50,000 ರೂ. ಮೌಲ್ಯದ ಆಭರಣ, 50,000 ರೂ.ನಗದು ವಶಕ್ಕೆ ಪಡೆಯಲಾಗಿದೆ. ಸೊರಬದ ಅಂಬೇಡ್ಕರ್ ಬಡಾವಣೆಯ ನಿವಾಸಿ ಗೋಪಿ ದೇವೇಂದ್ರಪ್ಪ ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ಕಾನುಕೇರಿ ಬಡಾವಣೆಯ ನಾಗರಾಜ ಅವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಹೆಂಚು ತೆಗೆದು ಕಳ್ಳತನ ಮಾಡಿದ್ದ,
ಚಿನ್ನಾಭರಣ, ನಗದು ಕಳುವಾದ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.