
ಮುಂಬೈ: ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಮಹಾರಾಷ್ಟ್ರ ಜನತೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿದ್ದಾರೆ.
ಸಂಪುಟ ಸಭೆ ಮುಗಿಸಿ ಹೊರಗೆ ಬಂದ ಮುಖ್ಯಮಂತ್ರಿ ಠಾಕ್ರೆ, ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಮಹಾರಾಷ್ಟ್ರ ಜನರಲ್ಲಿ ಅವರು ಕ್ಷಮೆಯಾಚಿಸಿದ್ದಾರೆ. ಸಂಪುಟ ಸದಸ್ಯರಿಗೆ ಧನ್ಯವಾದ ಹೇಳಿದ್ದಾರೆ. ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂದು ಸಂಪುಟ ಸಭೆಯಲ್ಲಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಇನ್ನು ಯಾವುದೇ ಸ್ಪಷ್ಟನೆ ನೀಡಿಲ್ಲ.