ಬೆಂಗಳೂರು : ಭ್ರಷ್ಟ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. 10 ಕೆ.ಜಿ. ಅಕ್ಕಿ ಬೇಕೋ ಬೇಡ್ವೋ ಎಂದು ಕೇಳಿದ್ದ ಭ್ರಷ್ಟ ಸಿದ್ದರಾಮಯ್ಯ ಅವರು ಇಂದು ಪಡಿತರ ಅಂಗಡಿ ಬಳಿ ನೋ ಸ್ಟಾಕ್ ಬೋರ್ಡ್ ಹಾಕಿದ್ದಾರೆ..! ಹೀಗಂತ ಬಿಜೆಪಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂದು ಬೋರ್ಡ್ ಹಾಕಲಾಗುತ್ತಿದೆ. ಹಲವೆಡೆ ಶೇ. 30 ಕ್ಕೂ ಹೆಚ್ಚು ಫಲಾನುಭವಿಗಳು ಒಂದು ಕೆಜಿ ಅಕ್ಕಿಯನ್ನೂ ಪಡೆದಿಲ್ಲ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಘೋಷಿಸಿ ಅವುಗಳನ್ನು ನೀಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಕಳ್ಳ ನೆಪವೊಡ್ಡಿ ತಪ್ಪಿಸಿಕೊಳ್ಳಲು ವಾಮಮಾರ್ಗ ಹಿಡಿದಿದೆ. ಸಿಎಂ ಸಿದ್ದರಾಮಯ್ಯನವರೇ, ಇಲ್ಲಿಯ ತನಕ ಕೊಡುತ್ತಿದ್ದ 5 ಕೆ.ಜಿ. ಅಕ್ಕಿ ಮೋದಿ ಸರ್ಕಾರದ್ದೇ ಹೊರತು ನಿಮ್ಮದಲ್ಲ. ತಾವು ಘೋಷಿಸಿದ್ದ ಹೆಚ್ಚುವರಿ 10 ಕೆ.ಜಿ. ಅಕ್ಕಿ ವಿತರಿಸುವ ಸಾಮರ್ಥ್ಯ ತಮ್ಮ ಸರ್ಕಾರಕ್ಕೆ ಇಲ್ಲದ್ದಿದ್ದರೆ ರಾಜ್ಯದ ಜನತೆಯ ಕ್ಷಮೆಯಾಚಿಸಿ, ಕನಿಷ್ಠ ಪಕ್ಷ ಮೋದಿ ಸರ್ಕಾರ ನೀಡುವ 5 ಕೆ.ಜಿ. ಅಕ್ಕಿಯನ್ನಾದರೂ ರಾಜ್ಯದ ಜನತೆಗೆ ಸರಿಯಾಗಿ ವಿತರಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಭ್ರಷ್ಟ @INCKarnataka ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. 10 ಕೆ.ಜಿ. ಅಕ್ಕಿ ಬೇಕೋ ಬೇಡ್ವೋ ಎಂದು ಕೇಳಿದ್ದ ಭ್ರಷ್ಟ @siddaramaiah ಅವರು ಇಂದು ಪಡಿತರ ಅಂಗಡಿ ಬಳಿ ನೋ ಸ್ಟಾಕ್ ಬೋರ್ಡ್ ಹಾಕಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ… pic.twitter.com/5UBLPZ2NGv
— BJP Karnataka (@BJP4Karnataka) March 18, 2025