alex Certify BIG NEWS : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಒಡನಾಡಿ ಸಂಸ್ಥೆ ಎಂಟ್ರಿ : ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಒಡನಾಡಿ ಸಂಸ್ಥೆ ಎಂಟ್ರಿ : ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ

ಮಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಎಂಟ್ರಿಯಾಗಿ ಪ್ರಕರಣಗಳನ್ನು ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಎಂಟ್ರಿಯಾಗಿದ್ದು, ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧರಿಸಿದೆ.

ಹೌದು, ನಿನ್ನೆ ಒಡನಾಡಿ ಸಂಸ್ಥೆಯ ಮುಖಂಡರು ಸೌಜನ್ಯ ಪರ ಹೋರಾಟಗಾರರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಪ್ರಕರಣದ ವಿರುದ್ಧ ರಾಜ್ಯಾದ್ಯಂತ ನ್ಯಾಯಯುತ ಹೋರಾಟ ನಡೆಸಲು ಸಿದ್ದರಾಗಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಕೊಲೆ, ಪ್ರಕರಣ ಇಡೀ ಸಮಾಜವೇ ತಲೆ ತಗ್ಗಿಸುವಂತಹ ಘಟನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಆರೋಪಿಗಳನ್ನು ನ್ಯಾಯಾಲಯದ ಕಟೆ ಕಟೆಗೆ ತಂದು ನಿಲ್ಲಿಸಲು ಸಾಧ್ಯವಾಗಿಲ್ಲ. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ, ಸಿಬಿಐ ಘನತೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮರು ತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದು ಒಡನಾಡಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾಲಿನ್ ಹೇಳಿದ್ದಾರೆ.

ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸಾಕ್ಷಾಧಾರಗಳ ಕೊರತೆ ಹಿನ್ನೆಲೆ ಆರೋಪಿ ಸಂತೋಷ್ ರಾವ್ ನನ್ನು ನಿರ್ದೋಷಿ ಎಂದು ಬೆಂಗಳೂರಿನ ಸಿಬಿಐ ಕೋರ್ಟ್ ನ್ಯಾಯಮೂರ್ತಿ ಸಿಬಿ ಸಂತೋಷ್ ಆದೇಶ ಹೊರಡಿಸಿದ್ದರು.

ಉಜಿರೆಯ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012 ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ನಂತರ ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಅನುಮಾನದ ಮೇರೆಗೆ ಸಮೀಪದ ಮನೆಯಲ್ಲಿ ವಾಸವಿದ್ದ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...