ಬೆಂಗಳೂರು: ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ನಾಳೆ ಸ್ವಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಾಳೆ ಬೆಳಿಗ್ಗೆ 9 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸದಲ್ಲಿ ಸಂದೌರ್ಯ ಜಗದೀಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಹಾಸನ ಜಿಲ್ಲೆಯ ಹಿರಿಸಾವೆ ಬಳಿ ಇರುವ ಫಾರಂಹೌಸ್ ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.
ನಿರ್ಮಾಪಕ ಸೌಂದರ್ಯ ಜಗದೀಶ್ ಮಹಾಲಕ್ಷ್ಮೀ ಲೇಔಟ್ ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ನೀಡಿರುವ ಮಾಹಿತಿ ಪ್ರಕಾರ 15 ದಿನಗಳ ಹಿಂದೆ ಸೌಂದರ್ಯ ಜಗದೀಶ್ ಅವರ ಅತ್ತೆ ಅಂದರೆ ಪತ್ನಿಯ ತಾಯಿ ಮೃತಪಟ್ಟಿದ್ದರು. ಇದರಿಂದ ಆಘಾತದಲ್ಲಿದ್ದ ಅವರು ತೀವ್ರ ಒತ್ತಡದಲ್ಲಿದ್ದರು. ಈಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.