
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಇತ್ತೀಚೆಗೆ ಸಣ್ಣ ತಂಡಗಳೊಂದಿಗೆ ಸೋಲನ್ನನುಭವಿಸಿದ್ದು, ಇದರಿಂದ ಹೊರಬರಲು ನೋಡುತ್ತಿದ್ದಾರೆ. ವಿಶ್ವಕಪ್ ನ ಪಾಯಿಂಟ್ ಟೇಬಲ್ ನಲ್ಲಿ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದರೆ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.
ಕಳೆದ ಬಾರಿ ವಿಶ್ವಕಪ್ ಚಾಂಪಿಯನ್ ಆಗಿದ್ದ ಇಂಗ್ಲೆಂಡ್ ಈ ಬಾರಿ ಅಷ್ಟೇನೂ ಉತ್ತಮ ಪ್ರದರ್ಶನ ತೋರದಿದ್ದರೂ ಸಾಕಷ್ಟು ಆಲ್ ರೌಂಡರ್ ಗಳನ್ನು ಹೊಂದಿರುವ ಈ ತಂಡ ಇಂದು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ದಕ್ಷಿಣ ಆಫ್ರಿಕಾ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿದ್ದು ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರನ್ ಹೊಳೆಹರಿಸಲು ಸಜ್ಜಾಗಿದ್ದಾರೆ.