ಕರ್ನಾಟಕದಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ದಕ್ಷಿಣ ಭಾರತದ ಉಳಿದ ರಾಜ್ಯಗಳಲ್ಲಿಯೂ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.
ಬಿಜೆಪಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಪುನರ್ ರಚನೆ ಮಾಡಲಾಗಿದ್ದು, ಸಮಿತಿಗಳ ಪುನರ್ ರಚನೆಯಲ್ಲಿ ಮಿಷನ್ ದಕ್ಷಿಣ ಪರಿಕಲ್ಪನೆ ಪ್ರತಿಫಲನಗೊಂಡಿದೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲಿ ದಕ್ಷಿಣ ಭಾರತದ ಐದು ಜನರಿಗೆ ಸ್ಥಾನ ಕಲ್ಪಿಸಲಾಗಿದೆ. ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ತಮಿಳುನಾಡಿನ ವಾನತಿ ಶ್ರೀನಿವಾಸ್, ತೆಲಂಗಾಣದ ಕೆ. ಲಕ್ಷ್ಮಣ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅವರಿಗೆ ಸ್ಥಾನ ನೀಡಲಾಗಿದೆ.
ಬಿಜೆಪಿಯ ಸಂಸದೀಯ ಮಂಡಳಿಯಲ್ಲಿ ದಕ್ಷಿಣ ಭಾರತದ ಮೂವರಿಗೆ ಸ್ಥಾನ ನೀಡಲಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿ.ಎಲ್. ಸಂತೋಷ್ ಮತ್ತು ಕೆ. ಲಕ್ಷ್ಮಣ್ ಅವರಿಗೆ ಸ್ಥಾನ ನೀಡಲಾಗಿದೆ.
ಈ ಮೂಲಕ ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಹೇಳಲಾಗಿದೆ.