alex Certify ಜೂ. 15, 16 ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 15, 16 ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ

ಬೆಂಗಳೂರು: ಜೂನ್ 15, 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ ನಡೆಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಹಿತಿ ನೀಡಿದ ಸಚಿವರು, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಡೆಸುವ ದಕ್ಷಿಣ ಭಾರತ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಪ್ರವಾಸೋದ್ಯಮ ಉತ್ತೇಜನದ ಉದ್ದೇಶದಿಂದ ಉತ್ಸವ ಆಯೋಜಿಸಲಾಗಿದೆ. ಹಂಪಿ, ಬಾದಾಮಿ, ಪಟ್ಟದಕಲ್ಲು, ಗದಗ, ಲಕ್ಕುಂಡಿ, ಮೈಸೂರು, ಶ್ರೀರಂಗಪಟ್ಟಣ ಸೇರಿ 384 ಎಕರೆಯಲ್ಲಿ ಮೂಲ ಸೌಕರ್ಯ ಒದಗಿಸಲು ಹಣ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...